ಗಡಾಯಿ ಕಲ್ಲು(ಜಮಲಾಬಾದ್ ಕೋಟೆ)
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೆಂದರೆ ಎಲ್ಲರ ಮುಂದೆ ಮೂಡುವ ದೃಶ್ಯ `ಗಡಾಯಿ ಕಲ್ಲು'. ಬೆಳ್ತಂಗಡಿ ತಾಲೂಕಿನಲ್ಲೇ ಅತ್ಯಂತ ಆಕರ್ಷಣೆಯ, ಚಾರಣಿಗರಿಗೆ, ಪ್ರವಾಸಿಗರಿಗೆ ಪ್ರಿಯ ತಾಣವಾಗಿ ಈ ಕಲ್ಲು ವಿರಾಜಿಸುತ್ತಿದೆ. ಕು ದುರೆ ಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ `ನಡ' ಗ್ರಾಮಕ್ಕೆ ಸೇರಿರುವ ಮತ್ತು ರಾಜ್ಯ ಹೆದ್ದಾರಿಗೆ ಸನಿಹದಲ್ಲಿರುವ ಈ ಗಡಾಯಿಕಲ್ಲು ಹಲವಾರು ಐತಿಹ್ಯಗಳನ್ನೂ ಚಾರಿತ್ರಿಕ ದಾಖಲೆಗಳನ್ನೂ ಹೊಂದಿದೆ. ಅದಮ್ಯ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವ ಈ ಕಲ್ಲು ಪಶ್ಚಿಮ ಘಟ್ಟದ ಹಿನ್ನಲೆಯೊಂದಿಗೆ ಶೋಭಿಸುತ್ತಾ ಚಾರಣಿಗರನ್ನು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಕೈ ಬೀಸಿ ಕರೆಯುತ್ತಿದೆ. ಸಮುದ್ರ ಮಟ್ಟದಿಂದ 1788 ಅಡಿ ಎತ್ತರದಲ್ಲಿದೆ ಗಡಾಯಿಕಲ್ಲು. ಇದರ ಮೇಲ್ಭಾಗದಲ್ಲಿ ನರಸಿಂಹಗಡ ಅಥವಾ ಜಮಲಾಗಡ ಎಂಬ ಕೋಟೆ ಕಾಣಬಹುದಾಗಿದೆ. 2,800 ಮೆಟ್ಟಿಲುಗಳನ್ನೇರಿದಾಗ ಜಮಲಾಗಡದ ಮೇಲ್ಭಾಗ ತಲುಪಬಹುದು. ಗಡಾಯಿಕಲ್ಲಿನ ಮೇಲಕ್ಕೇರುತ್ತಾ ಸಾಗಿದಂತೆ ಒಂದು ದ್ವಾರ ಸಿಗುತ್ತದೆ. ಈ ದ್ವಾರದ ನಂತರ ಕಲ್ಲನ್ನೇ ಕಡಿದು ವಿನ್ಯಾಸಗೊಳಿಸಿ ಮೆಟ್ಟಿಲು ರಚಿಸಲ್ಪಟ್ಟಿದೆ. ತುಂಬಾ ಕಡಿದಾದ ಈ ಮೆಟ್ಟಿಲುಗಳ ಮೇಲೆ ಸಾಗುವುದೇ ಒಂದು ಪ್ರಯಾಸ ಮತ್ತು ಸಾಹಸದ ಕಾರ್ಯ. ಇಂಡೋ ಸಾರ್ಸೆನಿಕ್ ಶೈಲಿಯನ್ನು ಹೋಲುವ ಶಿಲ್ಪ ಚಿತ್ರಗಳು ಇಲ್ಲಿನ ಒಂದನೇ ಮಹಾ ದ್ವಾರಗಳಲ್ಲಿ ಕಂಡುಬರುತ್ತವೆ. ಗಡಾಯಿಕಲ್ಲಿನ ಮೇಲ್ಭ...