ಜೈನಕಾಶಿ ಮೂಡಬಿದ್ರೆ
ಮಂಗಳೂರು-ಕಾರ್ಕಳ ರಸ್ತೆಯಲ್ಲಿ ಮಂಗಳೂರಿನಿಂದ 35 ಕಿಮೀ ದೂರದಲ್ಲಿರುವ ಚಿಕ್ಕ ಪಟ್ಟಣ ಮೂಡಬಿದರೆ ಜೈನಕಾಶಿ ಎಂದೇ ಖ್ಯಾತವಾಗಿದೆ. 1 7ನೆಯ ಶತಮಾನದಲ್ಲಿ ಮೂಡಬಿದರೆ ಪುತ್ತಿಗೆಯ ಚೌಟರಸರ ರಾಜಧಾನಿಯಾಗಿ ಮೆರೆದಿತ್ತು, ಪೋರ್ಚುಗೀಸರ ವಿರುದ್ದ ಹೋರಾಡಿದ ವೀರ ಮಹಿಳೆ ಉಳ್ಳಾಲದ ರಾಣಿ ಅಬ್ಬಕ್ಕ ಕೂಡ ಇದೇ ಊರಿನಲ್ಲಿ ಹುಟ್ಟಿದ್ದಳು. ೧೯೯೭ರಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ವಿಭಾಗಿಸುವ ಮುನ್ನ ಕಾರ್ಕಳ ತಾಲೂಕಿಗೆ ಸೇರಿದ್ದ ಮೂಡುಬಿದಿರೆಯು ಈಗ ಮಂಗಳೂರಿನ ಭಾಗವಾಗಿದೆ. ಮೂಡುಬಿದಿರೆಯು ಬಹಳ ಹಿಂದಿನಿಂದಲೂ ವ್ಯಾಪಾರ ವಾಣಿಜ್ಯದಲ್ಲಿ ಹೆಸರುವಾಸಿಯಾಗಿದ್ದ ಪಟ್ಟಣ. ಇಲ್ಲಿನ ವ್ಯಾಪಾರಿಗಳು ದೇಶ-ವಿದೇಶಗಳ ವಿವಿಧ ಸ್ಥಳಗಳ ವ್ಯಾಪಾರಿಗಳೊಂದಿಗೆ ವ್ಯವಹಾರ ಸಂಬಂಧ ಇಟ್ಟುಕೊಂಡಿದ್ದರೆಂದು ತಿಳಿದಿದೆ. ಇದಕ್ಕೆ ಸಣ್ಣ ಉದಾಹರಣೆಯಾಗಿ ಸಾವಿರ ಕಂಭದ ಬಸದಿಯ ಗೋಡೆಯ ಮೇಲೆ ಕೆತ್ತಲಾದ ಡ್ರಾಗನ್ ಪ್ರಾಣಿಯ ಉಬ್ಬು ಚಿತ್ರವನ್ನು ಗಮನಿಸಬಹುದು. ಆ ಕಾಲದಲ್ಲೇ ವ್ಯಾಪಾರಿಗಳು ಚೀನಾದೊಂದಿಗೆ ವ್ಯಾಪಾರ ಸಂಬಂಧವಿಟ್ಟುಕೊಂಡಿದ್ದರೆಂದು ಇದರಿಂದ ತಿಳಿಯುತ್ತದೆ. ಸಾವಿರ ಕಂಬದ ಬಸದಿ ಫಲ್ಗುಣಿ ನದಿಯ ದಂಡೆಯ ಮೇಲಿರುವ ಮೂಡಬಿದರೆಯಲ್ಲಿ 18 ಬಸದಿಗಳು ಹಲವಾರು ದೇವಾಲಯಗಳಿವೆ. ಈ ಪೈಕಿ ಸಾವಿರ ಕಂಬಗಳ ಬಸದಿ ಎಂದು ಖ್ಯಾತವಾಗಿರುವ ತ್ರಿಭುವನತಿಲಕ ಚೂಡಾಮಣಿ ಚಂದ್ರಪ್ರಭಾಸ್ವಾಮಿಯ ಮಹಾಚೈತ್ಯಾಲಯ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವ...