Posts

Showing posts from June, 2025

ಉಡುಪಿ ಅನಂತಪದ್ಮನಾಭ ದೇವಾಲಯದಲ್ಲಿ ಪತ್ತೆಯಾದ ಶಾಸನೋಕ್ತ ಕಲಾತ್ಮಕ ದೀಪ

Image
ಉಡುಪಿ ಜಿಲ್ಲೆ ಉಡುಪಿ ತಾಲೂಕಿನಲ್ಲಿರುವ ಪೆರ್ಡೂರಿನ  ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ. ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಮತ್ತು ಆದಿಮ ಕಲಾ ಟ್ರಸ್ಟ್ (ರಿ,), ಉಡುಪಿ ಇದರ ಸ್ಥಾಪಕ ಸದಸ್ಯ ಪ್ರೊ. ಮುರುಗೇಶಿ ಟಿ ಅವರು ಈ  ಶಾಸನೋಕ್ತ ಕಲಾತ್ಮಕ ದೀಪದ ಬಗ್ಗೆ ಅಧ್ಯಾಯನ ಮಾಡಿದ್ದು ಇದರ ಮಾಹಿತಿ ಪ್ರಕಟಿಸಿದ್ದಾರೆ. ದುಂಡನೆಯ ತಳವನ್ನು ಹೊಂದಿರುವ ದೀಪದ ಮೇಲ್ಭಾಗದಲ್ಲಿ ಕಮಾನಿನ ಆಕಾರದ ಅತ್ಯಂತ ಕಲಾತ್ಮಕವಾದ ಫಲಕವಿದೆ. ಈ ಫಲಕದ ಎರಡೂ ಬದಿಗಳಲ್ಲಿ ಶೈವ ಮತ್ತು ವೈಷ್ಣವ ಪಂಥದ ಶಿಲ್ಪಗಳಿದ್ದು, ದೇವಾಲಯದ ಶೈವ ಮತ್ತು ವೈಷ್ಣವ ಪರಂಪರೆಯ ಅಪರೂಪದ ಪ್ರತೀಕವಾಗಿದೆ. ದೀಪದ ಮೊದಲ ಮುಖದ ಮಧ್ಯದಲ್ಲಿ ಕಾಲಪುರುಷನ ಮೇಲೆ ನಿಂತಿರುವ ನಟರಾಜನ ಶಿಲ್ಪವಿದೆ. ಎಡ-ಬಲದಲ್ಲಿ ನಗಾರಿಯನ್ನು ಬಾರಿಸುವ ಗಣಧಾರಿ ಹಾಗೂ ತಾಳವನ್ನು ನುಡಿಸುತ್ತಿರುವ  ಭಂಗಿಯ ಶಿಲ್ಪಗಳಿವೆ.ಭಂಗಿಯ ಬಲಭಾಗದಲ್ಲಿ ಖಡ್ಗರಾವಣ ಮತ್ತು ಕುಮಾರ ಶಿಲ್ಪಗಳಿವೆ. ಖಡ್ಗ ರಾವಣ ಅರೆ ಬೆತ್ತಲೆಯಾಗಿ ವಿಸ್ಮಯಮುದ್ರೆಯಲ್ಲಿ ನಿಂತಿರುವ ಮಾರಿಯ ಭುಜದ ಮೇಲೆ ಆಸೀನನಾಗಿದ್ದಾನೆ. ಕುಮಾರ ಮಯೂರವಾಹನನಾಗಿದ್ದಾನೆ. ನಗಾರಿ ಬಾರಿಸುವ ಗಣಧಾರಿಯ ಎಡಕ್ಕೆ ನಂದಿವಾಹನೆ ಪಾರ್ವತಿ ಮತ್ತು ಮೂಷಕ ವಾಹನ ಗಣಪತಿಯ ಶಿಲ್ಪಗಳಿವೆ. ಈ ಶಿಲ್ಪಗಳು ಅತ್ಯಂತ ಸ್ಪಷ್ಟವಾಗಿ ಶಿವನ ಪ್ರಳಯ ತಾಂ...